4
Madhu Bangarappa: ರಾಜ್ಯದಲ್ಲಿ ಕೊರೊನಾ ಆರ್ಭಟವಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೇ 29 ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವುದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರಕಾರ ಕೊಡುವ ಮಾರ್ಗಸೂಚಿಯನ್ನು ನಾವು ಜಾರಿ ಮಾಡುತ್ತೇವೆ. ಆದರೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಹೇಳಿದ್ದಾರೆ.
