Home » Shivamogga : ‘ನನ್ನ ಗಂಡನಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ – ಮೃತ ಮಂಜುನಾಥ್ ಪತ್ನಿ ಪಲ್ಲವಿ ಹೇಳಿಕೆ

Shivamogga : ‘ನನ್ನ ಗಂಡನಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ – ಮೃತ ಮಂಜುನಾಥ್ ಪತ್ನಿ ಪಲ್ಲವಿ ಹೇಳಿಕೆ

0 comments

Shivamogga : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಉಗ್ರರು ಪ್ರವಾಸಿಗರ ಧರ್ಮವನ್ನು ಕೇಳಿ, ಮುಸ್ಲಿಮ್ ಅಲ್ಲದವರನ್ನು ಗುಂಡಿಕ್ಕಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿ ಬಂದಿದೆ. ಆದರೆ ಇದೀಗ ಶಿವಮೊಗ್ಗದ ಮೃತ ಮಂಜುನಾಥ್ ಅವರ ಪತ್ನಿ ಪತ್ನಿ ಪಲ್ಲವಿ ಅವರು ಉಗ್ರರು ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಹೌದು, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ. ಇತ್ತೀಚಿಗೆ ಅವರ ಅಂತ್ಯಕ್ರಿಯೆ ಕೂಡ ನೆರೆವೆರಿದ್ದು, ಸರ್ಕಾರ ಸಹ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದೆ. ಇದಿಗ ಮೃತ ಮಂಜುನಾಥ್ ಪತ್ನಿ ಪಲ್ಲವಿ ಅವರು ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನನ್ನ ಪತಿಯನ್ನು ಕೊಂದಾಗ, ನಮ್ಮನ್ನು ಸಾಯಿಸಿ ಎಂದು ನಾನು ಮತ್ತು ನನ್ನ ಮಗ ಕೂಗಿ ಭಯೋತ್ಪಾದಕರನ್ನು ಕೇಳಿದ್ದು ಹೌದು. ಆಗ ಆ ಉಗ್ರರು ‘ಮೋದಿಗೆ ಹೋಗಿಹೇಳಿ’ ಎಂದಿದ್ದೂ ಹೌದು. ಆದರೆ, ನಾನು ಈ ಮಾತುಗಳನ್ನು ಹೇಳಿದ್ದಕ್ಕೆ ಅನೇಕ ನೆಗೆಟಿವ್ ಕಾಮೆಂಟ್ಸ್ ಬರುತ್ತಿದೆ ಎಂದು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಪತ್ನಿ ಪಲ್ಲವಿ ಹೇಳಿದ್ದಾರೆ. ನಾನು ಈ ಮಾತುಗಳನ್ನೆಲ್ಲಾ ವಿಡಿಯೋ ಮಾಡಿಟ್ಟುಕೊಳ್ಳಬೇಕಿತ್ತೇನು ಎಂದು ಪ್ರಶ್ನಿಸಿದ್ದಾರೆ.

You may also like