Home » Ujire: ಉಜಿರೆ: ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಕಳ್ಳರು!

Ujire: ಉಜಿರೆ: ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಕಳ್ಳರು!

0 comments
Crime News Bangalore

Ujire:ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಇಬ್ಬರು ಯುವಕರು ಎಗರಿಸಿದ ಘಟನೆ ಉಜಿರೆಯ (Ujire) ಓಡಲದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ರತ್ನ (55) ಎಂಬವರು ಎ.10 ರಂದು ಉಜಿರೆ ಓಡಲ ವ್ಯಾಘ್ರ ಚಾಮುಂಡಿ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯ ಸಮೀಪ ಬಂದು ಬೈಕ್ ಅನ್ನು ನಿಲ್ಲಿಸಿ ಒಬ್ಬ ಬೈಕ್ ನಿಂದ ಇಳಿದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ.

ಕಳ್ಳತನವಾದ ಚಿನ್ನದ ಸರ 33 ಗ್ರಾಂ ತೂಕದ್ದಾಗಿದ್ದು ಇದರ ಮೌಲ್ಯ ಸುಮಾರು ಒಂದೂವರೆ ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like