KRS Dam: ಹಳೆ ಮೈಸೂರು ಭಾಗದ ಜನತೆಗೆ ಆಧಾರವಾಗಿರುವ ಕಾವೇರಿ ನದಿಗೆ ಇದೇ ಮೊದಲ ಬಾರಿಗೆ ಜೂನ್ ನಲ್ಲೇ ಭರ್ತಿಯಾಗಿದೆ. ಇದುವರೆಗೂ ಜೂನ್ ತಿಂಗಳಲ್ಲೇ ಕೆ ಆರ್ ಎಸ್ ಡ್ಯಾಮ್ ಗೆ ಬಾಗಿನ ಅರ್ಪಿಸುವ ಅವಕಾಶ ಯಾವ ಮುಖ್ಯಮಂತ್ರಿಗೂ ದೊರೆತಿಲ್ಲ. ಆದುದರಿಂದ
ಸಾಮಾನ್ಯವಾಗಿ ಕೆಆರ್ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದೆ.
ಈ ವರ್ಷ ಅವಧಿಪೂರ್ವ ಮುಂಗಾರು ಮಳೆಯ ಕಾರಣ, ಜೂನ್ ಆರಂಭದಲ್ಲೇ ಡ್ಯಾಂ ನೀರಿನ ಮಟ್ಟ 100 ಅಡಿ ದಾಟುವ ಮೂಲಕ ದಾಖಲೆ ಬರೆದಿತ್ತು. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದ ನೀರಿನ ಮಟ್ಟ ಮೇ ಕೊನೆಯ ವಾರದಲ್ಲೇ 98 ಅಡಿ ತಲುಪಿತ್ತು. ಆ ಸಂದರ್ಭದಲ್ಲೇ ಕೆಆರ್ಎಸ್ ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. ಹಾಗಾಗಿ ಡ್ಯಾಂನಿಂದ 630 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು.
ಮುಂದಿನ 3 ದಿನಗಳ ಒಳಗಾಗಿ ಬಾಗಿನ ಅರ್ಪಿಸಿದರೆ, ಜೂನ್ ತಿಂಗಳಲ್ಲಿಯೇ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ.
ಇದನ್ನೂ ಓದಿ;ಉಚಿತ ಟಿಕೆಟ್ ಘೋಷಣೆ ಮತ್ತು ಗೇಟ್ ತೆರೆಯುವುದು ತಡ ಕಾಲ್ತುಳಿತಕ್ಕೆ ಕಾರಣ: ಐಪಿಎಸ್ ದಯಾನಂದ್
