8
Lahore: ಪಾಕಿಸ್ತಾನದ ಲಾಹೋರ್‌ನಲ್ಲಿ ಇಂದು ಮೂರು ಸ್ಫೋಟ ಸಂಭವಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿದ್ದು, ಸ್ಫೋಟದ ನಂತರ ಸೈರನ್ ಮೊಳಗಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಗಳಿಂದಾಗಿ ಲಾಹೋರ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.
ತಮ್ಮ ತಮ್ಮ ಮನೆಗಳಿಂದ ಜನರು ಭಯಭೀತರಾಗಿ ಹೊರಗೆ ಓಡಿ ಬಂದಿದ್ದು, ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
