2
Mantralaya: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮೂವರು ಪ್ರವಾಸಿಗರ ಕುಟುಂಬಕ್ಕೆ ಮಂತ್ರಾಲಯ ಮಠ ಪರಿಹಾರವನ್ನು ಘೋಷಿಸಿದೆ.
ಹೌದು, ಮಂತ್ರಾಲಯ ಮಠದ ಗುರುಗಳಾದ ಸುಭುದೇಂದ್ರತೀರ್ಥ ಸ್ವಾಮೀಜಿ ಉಗ್ರರ ದಾಳಿಯಲ್ಲಿ ಹತರಾದ ಮೂವರು ಕನ್ನಡಿಗರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಮೃತರ ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಯನ್ನು ಮಂತ್ರಾಲಯ ವಹಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಅಲ್ಲದೆ ಉಗ್ರರ ದಾಳಿಯಲ್ಲಿ ಮೃತಪಟ್ಟವರೆಲ್ಲಾ ನಮ್ಮವರೇ, ನಮ್ಮ ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡ ನೋವು ನಮಗಿದೆ. ಹೀಗಾಗಿ ಮೃತರು ಹಾಗೂ ಗಾಯಾಳುಗಳ ಕುಟುಂಬದ ಜತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
