5
Kodagu: ಪೊನ್ನಂಪೇಟೆ ತಾಲೂಕು ನಲ್ಲೂರು ( Kodagu) ಗ್ರಾಮದಲ್ಲಿ ಹಾಡ ಹಗಲೇ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಹೌದು, ಇಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ರಸ್ತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊಬೈಲ್ ಕ್ಯಾಮರದಲ್ಲಿ ಸೆರೆಯಾದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
