Pravin Togadiya: ‘ಹಿಂದೂಗಳ ಸುರಕ್ಷತೆ ನಮ್ಮ ಮುಖ್ಯ ಧೈಯವಾಗಿದ್ದು, ಅದರಂತೆ ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ’ ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಭರವಸೆ ನೀಡಿದರು.
ಹಿಂದೂ ದಂಪತಿ ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಶೈಕ್ಷಣಿಕ ಜವಾಬ್ದಾರಿ ನಮ್ಮದಾಗಿದ್ದು, ಅಂತಹ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ತೀನ್ ಬಚ್ಚೆ, ಹಿಂದೂ ಸಚ್ಚೆ; ಬಾಕಿ ಸಬ್ ಕಚ್ಚೆ’ ಎಂದು
ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಕನಸು ನಿಮ್ಮದೇ’ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಅಂತರರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಈ ರೀತಿ ಉತ್ತರಿಸಿದ್ದಾರೆ.
