ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ರವರು, ಇಂದು ನ.28 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಬೆಳಗ್ಗೆ 9.55ಕ್ಕೆಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ 11.05ಕ್ಕೆ ವಿಮಾನ ನಿಲ್ದಾಣದಲ್ಲಿ ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಿದ್ದಾರೆ.
ನಂತರ 11.30ಕ್ಕೆ ವಿಮಾನ ನಿಲ್ದಾಣ ಸಭಾಂಗಣದಲ್ಲಿ ಕರಾವಳಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಗುವುದು. ತದನಂತರ ಮಧ್ಯಾಹ್ನ 12.30ಕ್ಕೆ ನಂದಿನಿ ನದಿಗೆ ತ್ಯಾಜ್ಯ ನೀರು ಸೇರಿ ಕಲುಷಿತಗೊಂಡು ಸಮಸ್ಯೆಯಾಗುತ್ತಿರುವ ಕುರಿತು ಚರ್ಚೆ, ಮಧ್ಯಾಹ್ನ 3ಕ್ಕೆ ಪಡೀಲ್ ಪ್ರಜಾ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಜತೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸಂಜೆ 5.15ಕ್ಕೆ ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ, ಹೊಸ ಅಧ್ಯಕ್ಷರ ಪದಗ್ರಹಣ ಮತ್ತು ಕಾರ್ಯಕರ್ತರ ಸಭೆ ನಡೆಯಲಿದ್ದು ರಾತ್ರಿ ನಗರದಲ್ಲಿ ವಾಸ್ತವ್ವ ಹೂಡಲಿದ್ದಾರೆ ಸಚಿವ ಗುಂಡೂ ರಾವ್. ನಾಳೆ, ನ.29ರಂದು ಬೆಳಗ್ಗೆ 7.30ಕ್ಕೆ ಮಂಗಳ ಕ್ರೀಡಾಂಗಣದಲ್ಲಿ ನಡೆಯುವ ವಾಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೆಳಗ್ಗೆ 10.40ಕ್ಕೆಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
