2
Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ. ಈ ಬಾರಿ ಗುತ್ತಿಗೆ ನೀಡುವುದಿಲ್ಲ, ಇಲಾಖೆಯಿಂದಲೇ ಟೋಯಿಂಗ್ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪಾರ್ಕಿಂಗ್ ಸಮಸ್ಯೆ ತಲೆ ನೋವಾಗಿದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುವುದು. ಪೊಲೀಸರಿಗೆ ಜನರ ಜತೆ ಮಾನವೀಯತೆಯಿಂದ ವರ್ತಿಸಲು, ಶಾಂತಿಯಿಂದ ವರ್ತಿಸಲು ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
