Home » Mangaluru: ಮಂಗಳೂರಿನಲ್ಲಿ ಘೋರ ದುರಂತ: 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Mangaluru: ಮಂಗಳೂರಿನಲ್ಲಿ ಘೋರ ದುರಂತ: 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

by Mallika
0 comments

Mangaluru: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ.

ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್‌ (15) ಸಾವನ್ನಪ್ಪಿದ್ದಾಳೆ.

ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್‌ ಅಹ್ಮದ್‌ ದಂಪತಿ ಅಪಾರ್ಟ್‌ಮೆಂಟ್‌ನ 12 ನೇ ಮಹಡಿಯಲ್ಲಿ ವಾಸವಾಗಿದ್ದರು.

ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

You may also like