K-set –UGC net: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಕಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಮುಕ್ತ ವಿವಿ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಜೂನ್, 30 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
