Home » Bengaluru : ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಲ್ಲಿದ್ದ ಮರಗಳ ಮಾರಣ ಹೋಮ!!

Bengaluru : ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಲ್ಲಿದ್ದ ಮರಗಳ ಮಾರಣ ಹೋಮ!!

0 comments

Bengaluru : ರಾಹುಲ್ ಗಾಂಧಿ ಪ್ರತಿಭಟನೆಗೆ ಅಡ್ಡಿಯಾಗುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹತ್ತಾರು ವರ್ಷಗಳಿಂದ ಬೆಳೆಸಿದ್ದ ಮರಗಳನ್ನು ಕಡಿದು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ.

 

ಆಗಸ್ಟ್ 5, 2025ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಅಕ್ರಮ ಮತ್ತು ಬಿಜೆಪಿಯ ಅಧಿಕಾರ ದುರುಪಯೋಗದ ವಿರುದ್ಧ ನಡೆಸಲಿರುವ ರಾಹುಲ್ ಗಾಂಧಿ ಪ್ರತಿಭಟನೆಗೆ ಅಡ್ಡಿಯಾಗುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹತ್ತಾರು ವರ್ಷಗಳಿಂದ ಬೆಳೆಸಿದ್ದ ಮರಗಳನ್ನು ಕಡಿದು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ.

ಮರ ಕಡಿದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಉಪ್ಪಾರಪೇಟ್‌ ಪಿಸಿ ಮಹದೇವಸ್ವಾಮಿ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿದೆ.

ಹೈಕಮಾಂಡ್ ಖುಷಿ ಪಡಿಸಲು ಪೈಪೋಟಿಗೆ ಬಿದ್ದಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಫ್ರೀಡಂ ಪಾರ್ಕ್ ಕಾಂಪೌಂಡ್ ಒಡೆದು ರಸ್ತೆ ನಿರ್ಮಾಣ ಮಾಡಿ, ಮರಗಳ ಮಾರಣಹೋಮ ಮಾಡಿದ್ದಕ್ಕೆ ಪರಿಸರವಾದಿಗಳು ಛೀಮಾರಿ ಹಾಕುತ್ತಿದ್ದಾರೆ. ಕಾಂಗ್ರೆಸ್ಸಿಗರೇ ನಿಮ್ಮ ನಾಟಕ ತುಂಬಾ ದಿನ ನಡೆಯುವುದಿಲ್ಲ, ಶೀಘ್ರವೇ ನಿಮ್ಮ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

You may also like