Bengaluru: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ನಿನ್ನೆ (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್ ಸಂಬಂದಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ ಇಬ್ಬರನ್ನೂ ಅಪಹರಿಸಿ ಬರ್ಬರವಾಗಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಕೊಲೆಯಾದ ತಂದೆ ಮಕ್ಕಳು ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು.
ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: Mangalore: ಮಂಗಳೂರಿನ ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ
