1
Udupi: ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 10 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಮಣಿಪಾಲ್‌ನಲ್ಲಿ ನಡೆದ ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು.
ಈ ಕುರಿತು ಹೆಬ್ರಿ ತಾಲೂಕಿನ ಶ್ರೀ ಶೈಲ, ಚಾರ ಗ್ರಾಮದ ಸೌರಭ್ ಬಲ್ಲಾಳ್ ಅವರು ಮಣಿಪಾಲ್ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ಬಿಜೆಪಿ ಕಾರ್ಯಕರ್ತರು ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದರು ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಈ ಕಾರಣದಿಂದ ಯಶ್‌ಪಾಲ್ ಸುವರ್ಣ, ಗಿರೀಶ್, ಪೃಥ್ವಿರಾಜ್ ಶೆಟ್ಟಿ ಸೇರಿದಂತೆ 10 ಮಂದಿ ವಿರುದ್ಧ ದೂರು ದಾಖಲಾಗಿದೆ.
