Home » Udupi Nejaru Case: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ನ್ಯಾಯಾಲಯಕ್ಕೆ ಹಾಜರು

Udupi Nejaru Case: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ನ್ಯಾಯಾಲಯಕ್ಕೆ ಹಾಜರು

by Mallika
1 comment
Udupi Nejaru Case

Udupi Nejaru Case: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇಂದು ಆರೋಪಿ ಮೇಲೆ ಇರುವ ಆಪಾದನೆಯ ಮೇಲೆ ವಾಚಿಸುವ ಪ್ರಕ್ರಿಯೆ ನಡೆದಿದೆ.

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಪ್ರವೀಣ್‌ ಚೌಗುಲೆಯನ್ನು ಪೊಲೀಸ್‌ ಭದ್ರತೆಯಲ್ಲಿ ತನಿಖಾಧಿಕಾರಿಯಾಗಿರುವ ಮಲ್ಪೆ ಪೊಲೀಸ್‌ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಕುರಿತು ವರದಿಯಾಗಿದೆ.

ಆಪಾದನೆ ವಾಚಿಸುವ ಪ್ರಕ್ರಿಯೆ ಮುಗಿದ ನಂತರ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ವಾಪಾಸು ಜೈಲಿಗೆ ಕರೆದೊಯ್ಯಲಾಗಿದೆ. ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್‌ ಆಳ್ವ ಉಪಸ್ಥಿತರಿದ್ದರು.

ಇದನ್ನೂ ಓದಿ: KSRTC: ಬಸ್ಸಿನಲ್ಲಿ ಮೈಸೂರಿಗೆ ಹೊರಟಿದ್ದ ನಾಲ್ಕು ಲವ್‌ಬರ್ಡ್ಸ್‌ಗೆ ರೂ.444 ಟಿಕೆಟ್

You may also like

Leave a Comment