Home » ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

by Praveen Chennavara
0 comments

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ

ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ

2019 ರ ಅಗಸ್ಟ್‌ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿರ್ಗಮನ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ವಹಿಸಿ ಕೊಂಡ ಜಿ ಜಗದೀಶ್‌ ಆರಂಭದಿಂದಲ್ಲೆ ಜಿಲ್ಲೆಯ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಆರಂಭದಿಂದಲೂ ಸವಾಲುಗಳನ್ನೇ ಎದುರಿಸಿದ ಅವರು ವ್ಯವಸ್ಥಿತವಾಗಿ ನಿರ್ವಹಿಸಿದ ಕೀರ್ತೀ ಅವರದ್ದಾಗಿದೆ.

You may also like

Leave a Comment