Home » ಉಡುಪಿ | ಗದ್ದೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಇಬ್ಬರಿಗೆ ಗಂಭೀರ ಗಾಯ

ಉಡುಪಿ | ಗದ್ದೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಇಬ್ಬರಿಗೆ ಗಂಭೀರ ಗಾಯ

by ಹೊಸಕನ್ನಡ
0 comments

ಗದ್ದೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪರ್ಕಳದ ಪರೀಕದಲ್ಲಿ ನಡೆದಿದೆ.

ಉಡುಪಿಯಲ್ಲಿ ಬೆಳಗ್ಗೆಯಿಂದ ಗುಡುಗು,
ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಒಮ್ಮೆಲೆ ಸಿಡಿಲು ಅಪ್ಪಳಿಸಿದ ಕಾರಣ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment