Home » Udupi: ಮಲ್ಪೆ: ಹಾಡುತ್ತಿರುವಾಗಲೇ ಹೃದಯಾಘಾತದಿಂದ ಎಎಸ್‌ಐ ಸಾವು

Udupi: ಮಲ್ಪೆ: ಹಾಡುತ್ತಿರುವಾಗಲೇ ಹೃದಯಾಘಾತದಿಂದ ಎಎಸ್‌ಐ ಸಾವು

0 comments
Heart Attack

Udupi: ಮಲ್ಪೆ ಪೊಲೀಸ್‌ ಠಾಣೆಯ ಎಎಸ್‌ಐ ವಿಶ್ವನಾಥ್‌ (58) ಕಾರ್ಯಕ್ರಮವೊಂದರಲ್ಲಿ ಹಾಡುತ್ತಿದ್ದ ಸಂದರ್ಭದಲ್ಲಿಯೇ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ರಾತ್ರಿ ಮಲ್ಪೆಯಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದು, ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಇವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ನಂತರ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಹೃದಯಾಘಾತದಿಂದ ವಿಶ್ವನಾಥ್‌ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

You may also like