Home » ಆರ್ಥಿಕ ಸಂಕಷ್ಟದಿಂದ ಬೇಸತ್ತು ಇಲಿ ಪಾಷಾಣ ಸೇವಿಸಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಆರ್ಥಿಕ ಸಂಕಷ್ಟದಿಂದ ಬೇಸತ್ತು ಇಲಿ ಪಾಷಾಣ ಸೇವಿಸಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

0 comments

ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ.

ಇವರು ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ತಮ್ಮ ಮನೆಯಲ್ಲಿ ಇಲಿ ಪಾಷಾಣವನ್ನು ಸೇವಿಸಿ ಅಸ್ವಸ್ಥರಾಗಿದ್ದ ಇವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

You may also like

Leave a Comment