Home » ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನ

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನ

by Praveen Chennavara
0 comments

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅರ್ಜಿದಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಇಲಾಖಾ ವತಿಯಿಂದ ಸಬ್ಸಿಡಿಯನ್ನು ನೀಡಲಾಗುತ್ತದೆ. ಆದಾಯ ಮಿತಿ 1.50 ಲಕ್ಷ ಮೀರಿರಬಾರದು ಎಂದು ಸೂಚಿಸಲಾಗಿದೆ.

ವಯೋಮಿತಿ 18-55 ವರ್ಷ ಆಗಿರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

ಸುಳ್ಯ -08257-230239. ಅರ್ಜಿ ಸಲ್ಲಿಸಲು ಸೆ.10 ರ ಸಂಜೆ 5.30ರ ಒಳಗಾಗಿ ಸಲ್ಲಿಸಬೇಕು.

You may also like

Leave a Comment