Home » Belthangady: ಗುರುವಾಯನಕೆರೆಯಲ್ಲಿ ಉಲಾಯಿ ಪಿದಾಯಿ ಜೂಜಾಟ: 9 ಮಂದಿಯ ವಿರುದ್ಧ ಕೇಸ್‌ ದಾಖಲು!

Belthangady: ಗುರುವಾಯನಕೆರೆಯಲ್ಲಿ ಉಲಾಯಿ ಪಿದಾಯಿ ಜೂಜಾಟ: 9 ಮಂದಿಯ ವಿರುದ್ಧ ಕೇಸ್‌ ದಾಖಲು!

0 comments

Belthangady: ಗುರುವಾಯನಕೆರೆ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ (Belthangady) ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಪಣೆಜಾಲ್ ಗ್ರಾಮದ ಮನೆಯೊಂದರಲ್ಲಿ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಾಪುರ್ ಮರ್ ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಆಟಕ್ಕೆ ಬಳಸುವ ಕಾರ್ಡ್ಸ್, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, 26,778 2 ರೂ ನಗದು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act-1963 2 0 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Supreme court: ಥಗ್ ಲೈಫ್ ಸಿನಿಮಾ ಪ್ರದರ್ಶನಕ್ಕೆ ವಿರೋಧ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ- ಸುಪ್ರೀಂ ಕೋರ್ಟ್

You may also like