4
Rain: ಹವಮಾನ ವೈಪರಿತ್ಯದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಂತೆಯೇ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಕೂಡ ಮಳೆಯಾಗುವ ಸಂಭವ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
ಹೌದು, ಈ ವರ್ಷ ಮಳೆಗಾಲ, ಚಳಿಗಾಲ ಎನ್ನದೇ ಸುರಿದ ಮಳೆಯೋ ಇದೀಗ ಬೇಸಿಗೆ ಕಾಲವನ್ನು ಕೂಡ ನೋಡದೆ ಸುರಿಯಲು ಸಜ್ಜಾಗಿ ನಿಂತಿದೆ. ಬಂಗಾಳಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೀಗಾಗಿ ವಾಯುಭಾರ ಕುಸಿತ ಹಿನ್ನೆಲೆ ನಾಳೆಯಿಂದ ಕೆಲವೆಡೆ ಮಳೆ ಆಗುವ ನಿರೀಕ್ಷೆ ಇದೆ. ರಾಜ್ಯದ ಜಿಲ್ಲೆಗಳಾದ ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಹಾಗೂ ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದೆ.
