Home » ಉಪ್ಪಳ : ಕಾರು ಹಾಗೂ ಬೈಕ್ ನಡುವೆ ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಉಪ್ಪಳ : ಕಾರು ಹಾಗೂ ಬೈಕ್ ನಡುವೆ ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

0 comments

ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಮೃತ ಪಟ್ಟ ವಿದ್ಯಾರ್ಥಿಯನ್ನು ಉಪ್ಪದಳ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ.

ಇಶಾನ್ ಪ್ರಯಾಣಿಸುತ್ತಿದ್ದ ಬೈಕ್, ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಅಪಘಾತ ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ 7.30ರ ಸುಮಾರಿಗೆ ನಡೆದಿದೆ.

ಮೃತ ವಿದ್ಯಾರ್ಥಿ ಇಶಾನ್ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ. ಇದೀಗ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

You may also like

Leave a Comment