Home » BJP protest: ಯೂರಿಯಾ ಕೊರತೆ: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

BJP protest: ಯೂರಿಯಾ ಕೊರತೆ: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

0 comments

BJP protest : ರಾಜ್ಯದಲ್ಲಿ ಅನೇಕ ಜಿಲ್ಲೆಗಳಲ್ಲಿ ಗೊಬ್ಬರ ಕೊರತೆ (Fertilizers Shortage) ಎದುರಾಗಿದ್ದು, ಇದೇ ವಿಚಾರ ಕಾಂಗ್ರೆಸ್(Congress) ಹಾಗೂ ಬಿಜೆಪಿ (Bjp) ನಾಯಕರ ನಡುವೆ ಕಲಹ ತಂದಿದೆ. ಅಲ್ಲದೇ ಬಿಜೆಪಿ ಪ್ರೊಟೆಸ್ಟ್(Bjp Protest) ಗೂ ಸಹ ಮುಂದಾಗಿದೆ

ಬಹುತೇಕ ಜಿಲ್ಲೆಗಳಲ್ಲಿ ಗೊಬ್ಬರ ಕೊರತೆ ಎದುರಾಗಿದೆ. ರೈತರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಗೊಬ್ಬರ ಕೊರತೆ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದ ವಿಚಾರಕ್ಕೆ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಇತರೆ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೊಬ್ಬರಕ್ಕಾಗಿ ಮಳೆ ಬರುವ ಮೊದಲೇ ಮೋದಿಗೆ ಪತ್ರ ಬರೆಯಬೇಕಿತ್ತು ಎಂದು ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಪರಮೇಶ್ವ‌ರ್, ಕೇಂದ್ರದಿಂದಲೇ ಗೊಬ್ಬರ ಪೂರೈಕೆಯಾಗಿಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ. ಇದಕ್ಕೆ ರೀ ಕೌಂಟರ್ ಕೊಟ್ಟ ವಿಜಯೇಂದ್ರ, ಎರಡೂವರೆ ಲಕ್ಷ ಮೆಟ್ರಿಕ್ ಟನ್‌ ಗೊಬ್ಬರ ಎಲ್ಲಿ ಹೋಯಿತು. ಇದೀಗ ರಾಜ್ಯ ಸರ್ಕಾರವೇ ಗೊಬ್ಬರ ಕೊರತೆಗೆ ಕಾರಣ ಎಂದು ಆರೋಪಿಸಿ ಬಿಜೆಪಿ, ರೈತರ ಸಂಕಷ್ಟವನ್ನು ಮುಂದಿಟ್ಟು ಹೋರಾಟಕ್ಕೆ ಮುಂದಾಗಿದ್ದು ಇಂದು ರಾಜ್ಯಾದ್ಯಂತ ಹೋರಾಟಕ್ಕಿಳಿಯಲಿದೆ. ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: Online payment: 

ಪದೇ ಪದೇ ಫೋನ್ ಪೇ, ಗೂಗಲ್ ಪೇ ಬ್ಯಾಲೆನ್ಸ್ ಚೆಕ್ ಮಾಡೋರಿಗೆ ಶಾಕಿಂಗ್ ನ್ಯೂಸ್!

You may also like