Home » UT khadar: ವಿಧಾನಸಭಾ ಸ್ಪೀಕರ್‌ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ!

UT khadar: ವಿಧಾನಸಭಾ ಸ್ಪೀಕರ್‌ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ!

0 comments
UT Khader

UT khadar: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.

ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದ‌ರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ.

ಈ ನೇಮಕ ಮಹತ್ವದು ಎಂದು ಪರಿಗಣಿಸಲಾಗಿದೆ. ಮಹಾರಾಷ್ಟ್ರದ ಸ್ಪೀಕರ್‌ ರಾಹುಲ್ ನಾರ್ವೇಕ‌ರ್ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು. ಟಿ. ಖಾದ‌ರ್,ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸಮಿತಿಯ ಸದಸ್ಯರಾಗಿದ್ದಾರೆ.

You may also like