Vande Bharat : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಈ ಕುರಿತು ಕರಾವಳಿ ಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದು ಮಂಗಳೂರಿಗೆ ಬಂದೇ ಭಾರತ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ. ಇದು ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಭಕ್ತರಿಗೂ ಕೂಡ ಸಿಹಿ ಸುದ್ದಿಯನ್ನು ನೀಡಿದಂತಾಗಿದೆ.
ಹೌದು, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ವಂದೇ ಭಾರತ್ ಸೇವೆಯನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ಇದು ಸಹಾಯವಾಗಲಿದೆ ಎಂದು ಹೇಳಿದ್ದಾರೆ. ಇದು ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತಾ ಅಭಿಮಾನಿಗಳಿಗೂ ಸಾಕಷ್ಟು ಅನುಕೂಲ ಮಾಡಿಕೊಡಲಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ವಿ. ಸೋಮಣ್ಣ ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಅಂತಿಮವಾಗಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಕಾಣಬಹುದು. ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಹೊಸ ಸೇವೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.
