5
Vijayanagara: ಅಪ್ರಾಪ್ತ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಹರಪನಹಳ್ಳಿಯಲ್ಲಿ ನಡೆದಿದೆ.
ಮದನ ಸ್ವಾಮಿ, ದೀಪಿಕಾ ಜೋಡಿಯ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಳೆಯ ಸ್ಥಿತಿಯಲ್ಲಿ ಪತ್ತೆಯಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಮದನ ಸ್ವಾಮಿ, ದೀಪಿಕಾ ಫಲಿತಾಂಶ ಪ್ರಕಟವಾದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರು ಕೂಡಾ ಪಾಸ್ ಆಗಿದ್ದರು. ಆದರೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಎಷ್ಟೇ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇವರಿಬ್ಬರ ಶವ ಕಾಡಿನಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
