Home » ನ್ಯಾಯಾಲಯದ ಆದೇಶ ಉಲ್ಲಂಘನೆ: ಪವರ್‌ ಟಿವಿ ರಾಕೇಶ್‌ ಶೆಟ್ಟಿಗೆ ಜೈಲು ಶಿಕ್ಷೆ ಪ್ರಕಟ

ನ್ಯಾಯಾಲಯದ ಆದೇಶ ಉಲ್ಲಂಘನೆ: ಪವರ್‌ ಟಿವಿ ರಾಕೇಶ್‌ ಶೆಟ್ಟಿಗೆ ಜೈಲು ಶಿಕ್ಷೆ ಪ್ರಕಟ

0 comments
Power TV MD Rakesh Shetty

ಬೆಂಗಳೂರು: ಪವರ್‌ ಟಿವಿ ವಾಹಿನಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಪ್ರಕರಣದ ವಿವರ: ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್‌. ರವಿಕಾಂತೇಗೌಡ ಅವರು ರಾಕೇಶ್‌ ಶೆಟ್ಟಿ ಮತ್ತು ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ವಿರುದ್ಧ ವ್ಯಾಜ್ಯವೊಂದನ್ನು ದಾಖಲು ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 2023 ರ ಸೆಪ್ಟೆಂಬರ್‌ 8 ರಂದು ನ್ಯಾಯಾಲಯವು ಮಧ್ಯಂತರ ಆದೇಶವೊಂದನ್ನು ನೀಡಿತ್ತು. ಈ ಆದೇಶವನ್ನು ಪ್ರತಿವಾದಿ ರಾಕೇಶ್‌ ಶೆಟ್ಟಿ ಅವರು ಉಲ್ಲಂಘನೆ ಮಾಡಿದ್ದಾರೆ ಎಂದು ರವಿಕಾಂತೇಗೌಡ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಅಬ್ದುಲ್‌ ಸಲೀಂ ಅವರು ಈ ಅರ್ಜಿಯ ವಿಚಾರಣೆ ನಡೆಸಿದ್ದು, ʼಪ್ರತಿವಾದಿ ರಾಕೇಶ್‌ ಸಂಜೀವ ಶೆಟ್ಟಿ ಅವರು ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆʼ ಎಂದು ಅಭಿಪ್ರಾಯಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ರಾಕೇಶ್‌ ಶೆಟ್ಟಿ ಅವರು ಮೂರು ತಿಂಗಳು ಜೈಲಿನಲ್ಲಿರುವ ಅವಧಿಯಲ್ಲಿ ಅವರಿಗೆ ತಗಲುವ ವೆಚ್ಚಗಳನ್ನು ದೂರುದಾರರಾದ ಬಿ.ಆರ್‌.ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

You may also like