3
Dhaka: ಬಾಂಗ್ಲಾದಲ್ಲಿ (Dhaka) ಮತ್ತೆ ಹಿಂಸಾಚಾರದ ಜ್ವಾಲೆ ಭುಗಿಲೆದ್ದಿದೆ. ಈಗಾಗಲೇ ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣಗಳು ರಾಜಧಾನಿ ಢಾಕಾದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.
ನಾವು ಗಳಿಸಿದ ಸ್ವಾತಂತ್ರ‍್ಯವನ್ನು, ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬುಲ್ಡೋಜರ್ ಮೂಲಕ ನಾಶಗಳಿಸಲು ಸಾಧ್ಯವಿಲ್ಲವೆಂದು ಶೇಖ್ ಹಸೀನಾ ಭಾರತದಿಂದ ಆನ್‌ಲೈನ್ ಮೂಲಕ ಮಾಡಿದ ಭಾಷಣಕ್ಕೆ ಕೆರಳಿದ ಪ್ರತಿಭಟನಾಕಾರರು, ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನ ಫೆ. 5 ಬುಧವಾರ ದಂದು ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್ ಮೂಲಕ ಮನೆ ಧ್ವಂಸಗೊಳಿಸಿದ್ದಾರೆ.
