Home » ವಿಟ್ಲ: ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ!! ಗೃಹರಕ್ಷಕ ಸಿಬ್ಬಂದಿ ಸಾವು

ವಿಟ್ಲ: ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ!! ಗೃಹರಕ್ಷಕ ಸಿಬ್ಬಂದಿ ಸಾವು

0 comments

ವಿಟ್ಲ: ಚಲಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಗೋಳ್ತಮಜಲು ಎಂಬಲ್ಲಿ ನಡೆದಿದೆ.ಮೃತರನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆ ನಿವಾಸಿ ಪ್ರಕಾಶ್(36) ಎಂದು ಗುರುತಿಸಲಾಗಿದೆ.

ಘಟನೆ ವಿವರ:ಮೃತ ಪ್ರಕಾಶ್ ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ವಿಟ್ಲ ಅರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಸೌಮ್ಯ, ಮಕ್ಕಳಾದ ಪ್ರಣವ್, ಪ್ರಣಮ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

You may also like

Leave a Comment