3
Vittla: ಕಳೆದ ಹಲವಾರು ಸಮಯಗಳಿಂದ ನಾಯಿ ಒಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದು. ಪೊಲೀಸ್ ಸಿಬ್ಬಂದಿಗಳು ತಿಂಡಿ ನೀಡುತ್ತಿದ್ದಾರೆ. ಆದರೆ ಇದೀಗ ವಿಟ್ಲ (Vittla) ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ.
ಕರೋಪ್ಪಾಡಿ ಗ್ರಾಮದ ಲಕ್ಷ್ಮಣ ಎಂಬವರು ಯಾವುದೊ ವಿಚಾರಕ್ಕೆ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಅವರು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
