Home » Wakf Board: ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊಡಸಿದ ಸರ್ಕಾರ !!

Wakf Board: ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊಡಸಿದ ಸರ್ಕಾರ !!

0 comments

Wakf Board: ದೇಶಾದ್ಯಂತ ವಕ್ಫ್ ಮಸೂದೆ ವಿಚಾರ ಭಾರೀ ಚರ್ಚೆ ಆಗುತ್ತಿದೆ. ಅಲ್ಲದೆ ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸರ್ಕಾರ ವಕ್ಫ್ ಮಂಡಳಿ(Wakf Board)ಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ.

ಹೌದು, ಆಂಧ್ರ ಪ್ರದೇಶ ಸರ್ಕಾರ(Andrapradesh Government ) ಈ ರೀತಿಯ ಮಹತ್ವದ ನಿರ್ಧಾರ ಕೈಗೊಂಡಿದ್ದು ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ. ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ. ಈ ಕುರಿತು ಶನಿವಾರ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ.ಫಾರೂಕ್ ಅವರು ಸ್ಪಷ್ಟಿಕರಣ ನೀಡಿದ್ದು ‘ಇಲಾಖೆ ಹೊರಡಿಸಿದ್ದ ಜಿಒ-47 ರದ್ದುಗೊಳಿಸಿ ಹಾಲಿ ಸರ್ಕಾರ ಹೊಸ ಜಿಒ-75 ಹೊರಡಿಸಿದೆ. ಕಳೆದ ವರ್ಷ ಅಕ್ಟೋಬರ್ 21 ರಂದು ಹಿಂದಿನ ಸರ್ಕಾರವು ಮಂಡಳಿಯ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

You may also like

Leave a Comment