Home » Mangaluru : ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ?

Mangaluru : ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ?

0 comments

Mangaluru : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿದೆ ಎಂಬ ಅನುಮಾನ ಮೂಡಿದ್ದು ಇದೀಗ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುಹಾಸ್ ಶೆಟ್ಟಿ (Suhas Shetty) ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಅನೇಕ ಕಾಣದ ಕೈಗಳ ಕೈವಾಡ ಶಂಕೆ ವ್ಯಕ್ತವಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಅಲ್ಲದೆ ಹಂತಕರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಾಣದ ಕೈಗಳ ಗುಂಪು ಮಾಡಿತ್ತೇ ಎಂಬ ಬಲವಾದ ಅನುಮಾನ ಸೃಷ್ಟಿಯಾಗಿದೆ.

You may also like