Home » ನೀರಿಗೆ ಬಿದ್ದು ಯುವಕ ಸಾವು | ಬಾಯಾರಿಕೆಯಿಂದ ನೀರು ಕುಡಿಯಲು ಹೋದಾಗ ನಡೆದ ಘಟನೆ

ನೀರಿಗೆ ಬಿದ್ದು ಯುವಕ ಸಾವು | ಬಾಯಾರಿಕೆಯಿಂದ ನೀರು ಕುಡಿಯಲು ಹೋದಾಗ ನಡೆದ ಘಟನೆ

by Praveen Chennavara
0 comments

ನೀರು ಕುಡಿಯಲು ಹೋದ ಯುವಕನೋರ್ವ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ್ನಾಳ್ ಬಳಿ ನಡೆದಿದೆ.

ನಾರಾಯಣಪುರ ಗ್ರಾಮದ ಜುಮ್ಮಣ್ಣ (22) ಮೃತ ಯುವಕ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಸೋಮವಾರ ಬಾಯಾರಿಕೆಯಿಂದ ನೀರು ಕುಡಿಯಲು ಹೋದ ಯುವಕ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಗ್ಗೆ ಮಾರ್ನಾಳ್ ಬಳಿಯ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.

ನಾರಾಯಣಪುರ ಬಳಿಯ ತೋಟಗಾರಿಕೆ ಇಲಾಖೆಯ ನರ್ಸರಿಯಲ್ಲಿ ಮೃತ ಯುವಕ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಭೇಟಿ ನೀಡಿರುವ ನಾರಾಯಣಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like

Leave a Comment