7
Mangalore: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದು, ಸ್ಥಳೀಯರು ಹೇಳಿದರೂ ಕೇಳದೆ ಹೋಗಿದ್ದಾರೆ. ಈ ಸಂದರ್ಭ ಏಕಾಏಕಿ ನೀರು ನುಗ್ಗಿದೆ. ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಎರುಗುಂಡಿ ಫಾಲ್ಸ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮದಲ್ಲಿ ಇದೆ. ಮುಂಗಾರು ಮಳೆಯ ಕಾರಣದಿಂದ ಫಾಲ್ಸ್ ತುಂಬಿ ಹರಿಯುತ್ತಿದೆ.
