Home » Congress Govt: ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವ‌ರ್ ಹೇಳಿಕೆ ವೈರಲ್

Congress Govt: ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವ‌ರ್ ಹೇಳಿಕೆ ವೈರಲ್

0 comments

Congress Govt: “ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ’ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬಾಗಲಕೋಟೆಯ ಬಾದಾಮಿಯಲ್ಲಿ ಮಾತನಾಡಿದ ಅವರು, “ಬಾದಾಮಿ ಅಭಿವೃದ್ಧಿಗೆ ಸಾವಿರ ಕೋಟಿ ಪ್ರಾಜೆಕ್ಟ್ ಆದರೂ ಪರವಾಗಿಲ್ಲ, ಒಂದು ಯೋಜನೆ ಸಿದ್ದ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ, ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ” ಎಂದು ಹೇಳಿದ್ದಾರೆ. ನಮ್ಮ ಬಳಿ ಇರುವ ದುಡ್ಡಿನಲ್ಲಿ ಈಗಾಗಲೇ ನಿಮಗೆ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಸ್ವತಃ ತ್ ಪಮಕ್ದವರೇ ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ತಿರುಗಿ ಬಿದ್ದಿದ್ದಾರೆ. ಸರ್ಕಾರ ಯಾವ ಸಾಧನೆಯನ್ನು ಮಾಡುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದಾರೆ. ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದು, ರಾಜಿನಾಮೆ ನೀಡುವುದಾಗಿಯೂ ಹೇಳಿದ್ದಾರೆ. ಅದರ ಬೆನ್ನಲ್ಲೇ ಗೃಹ ಸಚಿವ ಪರಮೇಶವರ್ ಹೇಳಿರುವ ಈ ಹೇಳಿಕೆ ಇದೀಗ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಇದನ್ನೂ ಓದಿ: Suicide: ಕನ್ಯಾಡಿ ನಿವಾಸಿ ಶಿವರಾಜ್ ಮತ್ತಿಲ ಆತ್ಮಹತ್ಯೆ!

You may also like