D K Shivakumar : ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 9 ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಿದ್ದು ಅದನ್ನು ಇದೀಗ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಹುಚ್ಚಲು ತೀರ್ಮಾನಿಸಿತ್ತು. ಈ ವಿಚಾರ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಈ ವಿಚಾರವಾಗಿ ಇದೀಗ ಸದನದಲ್ಲಿ ಡಿಕೆ ಶಿವಕುಮಾರ್ ಅವರು ಉತ್ತರಿಸಿದ್ದು ನಾವು ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಆದರೆ ವಿಲೀನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಚರ್ಚೆ ನಡೆದಿದ್ದು, ಇದರ ವಿರುದ್ಧ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು (ಮಾರ್ಚ್ 06) ವಿಧಾನಸಭೆ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಲೇ ಎದ್ದು ನಿಂತು ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ವಿವಿಗಳಿಗೆ ಅವುಗಳದ್ದೇ ಆದ ಸ್ಥಾನ, ಮೌಲ್ಯ ಇದೆ ಎಂದು ಡಿಕೆಶಿ ಹೇಳಿದರು.
ಅಲ್ಲದೆ ಇದಕ್ಕೆ ಬಿಜೆಪಿ ನಾಯಕ ಯಡಿಯೂರಪ್ಪನವರ ಮೊಮ್ಮಗನ ಉದಾಹರಣೆಯನ್ನು ತೆಗೆದುಕೊಂಡ ಡಿಕೆಶಿ ಅವರು ‘ಯಡಿಯೂರಪ್ಪನವರ ಪುತ್ರ ಸದನದಲ್ಲಿ ಇದ್ದಾರೆ. ಅವರ ಸಹೋದರಿಯ ಪುತ್ರ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಮುಂದಾದಾಗ. ಅವರು ಪಿಇಎಸ್ ಶಿಕ್ಷಣ ಸಂಸ್ಧೆಯಲ್ಲಿ ಓದಿದ್ದರು. ಅದು ಉತ್ತಮ ಸಂಸ್ಥೆಯಾದರೂ ಅದು ಅಧಿಕೃತ ವಿವಿಯಲ್ಲ ಎಂಬ ಕಾರಣಕ್ಕೆ ಅವರಿಗೆ ವಿದೇಶಿ ವಿವಿಯಲ್ಲಿ ಪ್ರವೇಶಾತಿ ನಿರಾಕರಿಸಲಾಗಿತ್ತು. ಎಸ್.ಎಂ ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅನೇಕ ಪ್ರಯತ್ನಗಳನ್ನು ಮಾಡಿ ಕೊನೆಗೆ ಅಲ್ಲಿ ಪ್ರವೇಶಾತಿ ಸಿಕ್ಕಿತು. ಇದು ಕೇವಲ ಒಂದು ಉದಾಹರಣೆಯಷ್ಟೇ. ಬೆಂಗಳೂರು ವಿವಿ, ಮೈಸೂರು ವಿವಿ ಪ್ರತಿಷ್ಠಿತ ವಿವಿಗಳಾಗಿವೆ. ಈ ವಿವಿಗಳ ಜಾರಿ ಕಾರ್ಯಸಾಧುವಲ್ಲ ಎಂದು ವಿಲೀನ ಮಾಡುತ್ತಿದ್ದೇವೆಯಷ್ಟೇ. ಈ ವಿಚಾರವಾಗಿ ನಾವು ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿದ್ದೇವೆ’ ಎಂದು ಹೇಳಿದರು.
