weather forecast: ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ(Udupi) ಜಿಲ್ಲೆಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯಾಗುವ(Rain) ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು(Thunder) ಬರುವ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಕರಾವಳಿ ತೀರ(Coastal) ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.
ಕೊಡಗಿನಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. ಹಾಸನ ಜಿಲ್ಲೆಯ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು ಉತ್ತರ, ಚಾಮರಾಜನಗರ (ಕೊಳ್ಳೇಗಾಲ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ – ಹಾವೇರಿ ಗಡಿಭಾಗಗಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸೂಚನೆ ಇದೆ.
ಉಳಿದ ದಾವಣಗೆರೆ, ಹಾವೇರಿ ಹಾಗೂ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಪಾಕಿಸ್ತಾನದ ಕರಾವಳಿ ಮೂಲಕ ಸಾಗಿ ಆಗಸ್ಟ್ 31ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ವಾಯುಭಾರ ಕುಸಿತವಾಗುವ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ.
