weather forecast: ಕಾಸರಗೋಡು (Kasaragodu) ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ (Coastal) ಬಿಸಿಲು (Sunny), ಮೋಡ (Cloudy) ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ(Rain) ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಮಳೆ ಇರಬಹುದು ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಕೊಡಗು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸೂಚನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಲಿದ್ದು, ಆಗಸ್ಟ್ 31ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿನ ಈಗಿನ ಮಳೆಯೂ ಕಡಿಮೆಯಾಗುವ ಲಕ್ಷಣಗಳಿದ್ದರೂ, ಕರಾವಳಿಯಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯ ಪರಿಣಾಮವನ್ನು ಕಾದು ನೋಡಬೇಕಾಗಿದೆ.
