Home » Weather forecast: ಇಂದಿನ ಕರ್ನಾಟಕದ ಹವಾಮಾನ ಮುನ್ಸೂಚನೆ: ಎಲ್ಲೆಲ್ಲಿ ಮಳೆ ಇದೆ?

Weather forecast: ಇಂದಿನ ಕರ್ನಾಟಕದ ಹವಾಮಾನ ಮುನ್ಸೂಚನೆ: ಎಲ್ಲೆಲ್ಲಿ ಮಳೆ ಇದೆ?

0 comments
Weather forecast

Weather forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೋಡಗಳ(Clouds) ಚಲನೆ ಆಗ್ನೇಯ ಕಡೆಗೆ ವಾಲಿರುವುದರಿಂದ ಮಡಿಕೇರಿ ಘಾಟಿಯ ಕೆಳಗಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ ಇದೆ.

ಕೊಡಗು(Kodagu) ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ(IMD) ಹೇಳಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು (ಥ್ರೋ ಚೆನ್ನಾಗಿರುವುದರಿಂದ), ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಲಿದೆ.

You may also like

Leave a Comment