1
Karnataka 2nd PU Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ವೆಬ್‌ಕಾಸ್ಟಿಂಗ್ ಮಾಡಲು ಮುಂದಾಗಿದೆ. ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ.
ಶಿಕ್ಷಣ ಇಲಾಖೆ ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವೆಬ್‌ಕಾಸ್ಟಿಂಗ್ ನ್ನು ಅಳವಡಿಸಿತ್ತು. ಹಾಗಾಗಿ ಮಾರ್ಚ್-ಎಪ್ರಿಲ್ 2025 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇದೇ ವ್ಯವಸ್ಥೆ ಮಾಡಲಾಗುತ್ತಿದೆ.
2025 ರಲ್ಲಿ ನಡೆಯುವ ಬೋರ್ಡ್ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾದ ಕಾಲೇಜುಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪತ್ರ ಬರೆದಿದ್ದು, ಸಿಸಿಟಿವಿ ಕ್ಯಾಮೆರಾಗಳ ಐಪಿ ಸಂಖ್ಯೆಯನ್ನು ಆಯಾ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರಿಗೆ ನೀಡುವಂತೆ ಈಗಾಗಲೇ ತಿಳಿಸಲಾಗಿದೆ.
