Prajwal Revanna : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದೆ. ಹೀಗಾಗಿ ನಿನ್ನೆಯಿಂದಲೇ ಅಧಿಕೃತವಾಗಿ ಸಜಾಬಂಧಿ ಖೈದಿಯಾಗಿದ್ದಾರೆ. ಇಷ್ಟೇ ಅಲ್ಲದೆ ಇಂದಿನಿಂದ ಅವರ ದಿನಾಚರಿಯು ಕೂಡ ಬದಲಾಗಲಿದೆ.
ಸದ್ಯ ಪ್ರಜ್ವಲ್ ರೇವಣ್ಣಗೆ 15528 ನಂಬರ್ ನೀಡಲಾಗಿದ್ದು, ಇಂದು (ಆಗಸ್ಟ್ 02) ಪ್ರಜ್ವಲ್ ರೇವಣ್ಣಗೆ ಜೈಲು ಸಿಬ್ಬಂದಿ ಬಿಳಿ ವಸ್ತ್ರ ನೀಡಲಿದ್ದು, ಜೈಲು ನಿಯಮಾವಳಿ ಅನುಸಾರ ಜೈಲು ಆಧೀಕ್ಷಕರು ನೀಡುವ ಕೆಲಸ ಮಾಡಿಕೊಂಡಿರಬೇಕು.
ಹೇಗಿರುತ್ತೆ ಪ್ರಜ್ವಲ್ ರೇವಣ್ಣ ದಿನಚರಿ:
ಪ್ರಜ್ವಲ್ ಕಡ್ಡಾಯ ಜೈಲಿನೊಳಗೆ 8 ಗಂಟೆ ಕೆಲಸ ಮಾಡಬೇಕು. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನ ಸಜಾಬಂಧಿ ಖೈದಿಗಳ ನಿಯಮಗಳನ್ನ ಚಾಚು ತಪ್ಪದೆ ಪಾಲಿಸಬೇಕು. ಬೇಕರಿ, ಗಾರ್ಡನ್, ಹೈನುಗಾರಿಕೆ, ತರಕಾರಿ ಬೆಳೆಯುವುದು, ಕರಕುಶಲ ವಸ್ತು, ಮರಗೆಲಸ ಸೇರಿ ಯಾವುದರೂ ಒಂದು ಕೆಲಸ ಆಯ್ಕೆ ಮಾಡಿಕೊಳ್ಳಬೇಕು.
ಪ್ರಜ್ವಲ್ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಕೂಡ ಪಾವತಿ ಮಾಡಲಾಗುತ್ತೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಅಂತ 524 ರೂಪಾಯಿ ಸಂಬಳ ನೀಡಲಾಗುತ್ತೆ. ಆಮೇಲೆ ಅರೆ ಕೌಶಲ್ಯ ಮಟ್ಟಕ್ಕೆ ಏರಿಕೆ ಮಾಡಲಾಗುತ್ತೆ. ಬಳಿಕ ಅನುಭವದ ನಂತರ ನುರಿತ ವರ್ಗಕ್ಕೆ ಬಡ್ತಿ ನೀಡಲಾಗುತ್ತೆ.
