Home » Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಮಳೆರಾಯ ಕೊಂಚ ಬಿಡುವು ಕೊಡ್ತಾನಾ?

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಮಳೆರಾಯ ಕೊಂಚ ಬಿಡುವು ಕೊಡ್ತಾನಾ?

0 comments

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಆದರೆ ಮಧ್ಯ ಬಿಡುವಿನ ಅಂತರ ಸ್ವಲ್ಪ ಜಾಸ್ತಿ ಇರಬಹುದು. ಮಳೆಯೊಂದಿಗೆ ಗಾಳಿಯ ವೇಗವೂ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಜೂನ್ 29 ಹಾಗೂ 30ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಬಿಡುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕೆಲವು ಭಾಗಗಳಲ್ಲಿ ಸ್ವಲ್ಪ ಬಿಸಿಲಿನ ಸಾಧ್ಯತೆಯೂ ಇದೆ. ಈಗಿನಂತೆ ಜೂನ್ 29ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಳೆಯ ಹೆಚ್ಚಿದಂತೆಯೇ ಮಲೆನಾಡು ಭಾಗಗಳಲ್ಲಿಯೂ ಹೆಚ್ಚಾಗುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನಂತೆ ಜೂನ್ 28ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 4ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.

ಇದನ್ನೂ ಓದಿ;Kodagu: ಕೊಡಗಿನಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಶಾಲೆಯೊಂದರ ತಡೆಗೋಡೆ

You may also like