Home » ಇಂದು ಈ ಕೆಲವು ಪ್ರದೇಶಗಳಿಗೆ ರೆಡ್ ಘೋಷಣೆ ! ಉಳಿದ ಜಿಲ್ಲೆಗೆ ಹವಾಮಾನ ಇಲಾಖೆ ಮೂನ್ಸೂಚನೆ ಏನು ?

ಇಂದು ಈ ಕೆಲವು ಪ್ರದೇಶಗಳಿಗೆ ರೆಡ್ ಘೋಷಣೆ ! ಉಳಿದ ಜಿಲ್ಲೆಗೆ ಹವಾಮಾನ ಇಲಾಖೆ ಮೂನ್ಸೂಚನೆ ಏನು ?

0 comments

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡಕ್ಕೆ  ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ

ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. 

ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಜುಲೈ 9ರವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲೇ ಹರಿಯುತ್ತಿದ್ದು, ಹಳ್ಳ ಕೊಳ್ಳಗಳು ಅಬ್ಬರಿಸಿ ಹರಿಯುತ್ತಿವೆ. ಯಾದಗಿರಿ  ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಕಾರಣ ಯಾದಗಿರಿ ಜನರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಸುರಪುರ, ಹುಣಸಗಿ ತಾಲೂಕುಗಳು ಹೊರತು ಪಡಿಸಿ ಉಳಿದ ನಾಲ್ಕು ತಾಲೂಕಿನಲ್ಲಿ ಮಳೆ ಕೊರತೆಯಾಗಿದೆ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಂದ ಪದವಿ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ರಜೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.

You may also like

Leave a Comment