Harish Poonja: ಮಾ.21,2025 ಸ್ಪೀಕರ್ ಯು ಟಿ ಖಾದರ್ ಅವರು ವಿಧಾನಸಭಾ ಅಧಿವೇಶನದಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಈ ವಿಚಾರ ಇನ್ನೂ ತಣ್ಣಗಾಗಿಲ್ಲ. ಇತ್ತ ಬಿಜೆಪಿ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ ವಾಪಸ್ ಪಡೆಯಬೇಕು ಎನ್ನುವ ಹೋರಾಟವನ್ನು ನಿಲ್ಲಿಸಿಲ್ಲ.
ಇತ್ತ ಕಡೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿರುವ ಕುರಿತು ವರದಿಯಾಗಿದೆ. ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಧರ್ಮದ ಹೇಳಿಕೆ ನೀಡಿದ ಆರೋಪಕ್ಕೆ ಸಿಲುಕಿದ್ದಾರೆ. ಹರೀಶ್ ಪೂಂಜಾ ಅವರು ಸ್ಪೀಕರ್ ಮುಸ್ಲಿಂರು ಅನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸ್ಪೀಕರ್ ಧರ್ಮದ ವಿಚಾರವನ್ನು ಶಾಸಕ ಹರೀಶ್ ಪೂಂಜಾ ಪ್ರಸ್ತಾಪಿಸಿದ್ದು, ಇದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಈ ದೂರನ್ನು ಹಕ್ಕು ಭಾದ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಪರಿಶೀಲನೆ ಮಾಡಲಿದ್ದಾರೆ.
