BJP: ಕರ್ನಾಟಕದ ಈ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಸುದ್ದಿ ಎಂದು ಭಾರಿ ಸದ್ದು ಮಾಡುತ್ತಿದೆ.
.21 ರಿಂದ 23ರವರೆಗೆ ಬೆಂಗಳೂರಿನಲ್ಲಿ ಆರ್ಎಸ್ಎಸ್ ಸಭೆ ನಡೆಯಲಿದ್ದು, ಇದಕ್ಕೂ ಮುನ್ನ ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಾಗಲಿದೆ ಎಂದು ವರದಿಯಾಗಿದೆ. ಹೀಗಾಗಿ ಕರ್ನಾಟಕದ ಬಿಜೆಪಿ ನಾಯಕ ಕೇಂದ್ರ ಸಚಿವ ಆಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟಲು ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.
ಅಂದ ಹಾಗೆ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರ ಮೂರು ಅವಧಿಯಲ್ಲಿಯೂ ಕೂಡ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಮೋದಿಗೆ ತುಂಬಾ ಆಪ್ತರಾಗಿದ್ದರು. ಮೋದಿ ಅವರ ಆಪ್ತ ವಲಯಗಳಲ್ಲಿ ಇವರು ಕೂಡ ಪ್ರಮುಖರು. ರಾಜ್ಯದ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಕ್ಕಿಂತಲೂ ಕೇಂದ್ರದಲ್ಲಿ ಇವರ ಅಗತ್ಯತೆ ಹಾಗೂ ಪ್ರಭಾವ ಹೆಚ್ಚಿದೆ. ಹೀಗಾಗಿ ಜೋಶಿ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಈ ಕುರಿತಾಗಿ ಯಾವುದೇ ಮಾಹಿತಿ ಅಧಿಕೃತವಾಗಿ ಹೊರಬಿದ್ದಿಲ್ಲ. ಇಷ್ಟೇ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷರೂ ಆಗಿದ್ದ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ಆಂಧ್ರದ ಬಿಜೆಪಿ ರಾಜ್ಯಾಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ, ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಮತ್ತು ಕೊಯಮತ್ತೂರಿನ ಶಾಸಕಿ ವನತಿ ಶ್ರೀನಿವಾಸನ್ ಅವರುಗಳ ಹೆಸರೂ ಬಿಜೆಪಿ ರಾಷ್ಟ್ರಾಧ್ಯಕ್ಷರ ಸ್ಥಾನದ ರೇಸ್ನಲ್ಲಿ ಕೇಳಿಬರುತ್ತಿದೆ ಎಂದು ವರದಿಯಾಗಿದೆ.
