4
Tumkur: ಕಿಡಿಗೇಡಿಗಳು ದೇವಸ್ಥಾನದ ಬಾಗಿಲಿಗೆ ಬೆಂಕಿ ಇಟ್ಟ ಘಟನೆ ತುಮಕೂರು (Tumkur) ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ಮಾ. 11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಹಟ್ನಾ ಗ್ರಾಮ ಸೇರಿದಂತೆ 32 ಗ್ರಾಮಗಳ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮುಂಜಾನೆ ಪೂಜೆ ಸಲ್ಲಿಸಲು ದೇವಸ್ಥಾನದಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಬಳಸಿದ ಕೆಲ ವಸ್ತುಗಳು ಪತ್ತೆಯಾಗಿದ್ದು, ಇನ್ನೂ ಕೆಲ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಕಂಡು ಹೌಹಾರಿದ ಭಕ್ತಾಧಿಗಳು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಜಿಲ್ಲೆಯ ತಿಪಟೂರಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
