Home » Mangalore: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಇಬ್ಬರ ಬಂಧನ

Mangalore: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಇಬ್ಬರ ಬಂಧನ

0 comments

Mangalore: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿರುವ ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರಿನ ಅಶೋಕ್‌ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಷಯ ತಿಳಿಸದೆ ಸ್ನೇಹಮಯಿ ಕೃಷ್ಣ ಮೇಲೆ ಈ ಬ್ಲಾಕ್‌ ಮ್ಯಾಜಿಕ್‌ ಮಾಡಲಾಗಿದೆ.

ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್‌ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿಯನ್ನು ಕಾಳಿಕಾಂಬ ದೇವಿ ಕೊರಳಿಗೆ ಹಾಕಿ, ಕುರಿಗಳ ರಕ್ತವನ್ನು ಸ್ನೇಹಮಯಿ ಕೃಷ್ಣ, ಗಂಗಾರಾಜು ಫೊಟೋಗೆ ಅರ್ಪಿಸಲಾಗಿತ್ತು. ಈ ದೃಶ್ಯ ಶ್ರೀರಾಮ ಸೇನೆ ಮುಖಂಡ ಪ್ರಸಾದ್‌ ಅತ್ತಾವರ ಮೊಬೈಲ್‌ನಲ್ಲಿ ಪತ್ತೆಯಾಗಿತ್ತು.

You may also like