Bengaluru : ಬೆಂಗಳೂರಲ್ಲಿ ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ ಮಹಿಳೆ ಒಬ್ಬರು ‘ಜೈ ಬಾಂಗ್ಲಾದೇಶ್’ ಇಂದು ಘೋಷಣೆ ಕೂಗಿದ್ದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ.
ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಜೆಸಿಬಿ ಬಳಕಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಕೂಲಿಂಗ್ ಗ್ಲಾಸ್ ಹಾಕಿಕೊಂಡು ಅಲ್ಲಿಂದ ಪಾಸ್ ಆಗುತ್ತಾಳೆ. ಈ ವೇಳೆ ಸ್ಥಳದಲ್ಲಿದ್ದ ಕೆಲವು ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದು, ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಬಾಂಗ್ಲಾದೇಶದ ಮೂಲದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಈಕೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ಪ್ರದೇಶದಲ್ಲಿ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
